ಬೆಂಗಳೂರು, ಆ. 26: ‘ಎಳೆಯ ಮಕ್ಕಳ ಉಜ್ವಲ ಭವಿಷ್ಯಕ್ಕೆ ಕುತ್ತು ಈ ಬಾಲಕಾರ್ಮಿಕ ಪದ್ಧತಿ. ಇದನ್ನು ವಿರೋಧಿಸುವ ಕುರಿತು ಕಾರ್ಮಿಕ ಇಲಾಖೆಯ ಮೂಲಕ ಭಿತ್ತಿಚಿತ್ರವನ್ನು ಪ್ರದರ್ಶಿಸಿ, ಜಾಗೃತಿ ಮೂಡಿಸುವ ವಿಶಿಷ್ಟ ಪ್ರಯತ್ನ’ ಎಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಜಂಟಿ ಕಾರ್ಯದರ್ಶಿ ಡಾ.ಜಿ.ಮಂಜುನಾಥ್ ತಿಳಿಸಿದ್ದಾರೆ.ಶನಿವಾರ ಇಲ್ಲಿನ ವಿಠ್ಠಲ್ ಮಲ್ಯ ವೃತ್ತದಲ್ಲಿ ಇಲಾಖೆಯ ವತಿಯಿಂದ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರುದ್ಧ ಭಿತ್ತಿಚಿತ್ರ ಪ್ರದರ್ಶನ ಮೂಲಕ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಬಾಲ ಕಾರ್ಮಿಕರನ್ನು ಯಾರೇ ಕಂಡು ಬಂದಲ್ಲಿ ಸಹಾಯವಾಣಿ ಸಂಖ್ಯೆ 1092 ಹಾಗೂ 112ಗೆ ಕರೆ ಮಾಡಿ ತಿಳಿಸಿ ಈ ಮೂಲಕ ನಾವು ಅಗತ್ಯ ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.  ಈ ಸಂದರ್ಭದಲ್ಲಿ ಇಲಾಖೆಯ ಅಪರ ಕಾರ್ಮಿಕ ಆಯುಕ್ತರು ಹಾಗೂ ಮಂಡಳಿಯ ಜಂಟಿ ಕಾರ್ಯದರ್ಶಿ ಡಾ.ಮಂಜುನಾಥ್ ಹಾಗೂ ನಿರ್ದೇಶಕ ಹಾಗೂ ನಟ ಹೇಮಂತ್ ಹೆಗಡೆ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.  