ಬೆಂಗಳೂರು, ಆ. 26: ‘ಆಪರೇಷನ್ ಹಸ್ತ’ದ ಚರ್ಚೆಯ ಬೆನ್ನಲ್ಲೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ, ಯಲ್ಲಾಪುರ ಕ್ಷೇತ್ರದ  ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.ಶುಕ್ರವಾರ ರಾತ್ರಿ ಮುಖ್ಯಮಂತ್ರಿಗಳ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗರುವ ಶಾಸಕ ಹೆಬ್ಬಾರ್‌, ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗ್ಗೆ ಚರ್ಚೆ ನಡೆಸಿದ್ದಾರೆನ್ನಲಾಗಿದೆ.   ಇನ್ನು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್, ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಇತ್ತೀಚೆಗೆ ಸಿದ್ದರಾಮಯ್ಯ ಅವರನ್ನು ಭೇಟಿ ನೀಡಿದ ಬೆನ್ನಲ್ಲೇ ಇದೀಗ ಶಿವರಾಮ ಹೆಬ್ಬಾರ್‌ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. 