ಬೆಂಗಳೂರು, ಆ.22: ಕ್ಯಾಬ್‍ನಲ್ಲಿ ಹೋಗುತ್ತಿದ್ದ ಯುವಕ-ಯುವತಿಯನ್ನು ಅಡ್ಡಗಟ್ಟಿ ದುಷ್ಕರ್ಮಿಯೊಬ್ಬ ಹಲ್ಲೆ ನಡೆಸಿದ ಆರೋಪದಡಿ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ.ನಾಗಲ್ಯಾಂಡ್ ಮೂಲದ ಯುವಕ-ಯುವತಿಯು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ಶೋಧ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಆ.17ರ ರಾತ್ರಿ 11.30ರ ಸುಮಾರಿಗೆ ಯುವಕ-ಯುವತಿಯು ಊಟ ಮುಗಿಸಿಕೊಂಡು ಕ್ಯಾಬ್‍ನಲ್ಲಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯದ ರಾಮಸ್ವಾಮಿಪಾಳ್ಯ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿ, ಕ್ಯಾಬ್ ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಸುಲಿಗೆಗೆ ಯತ್ನಿಸಿದ್ದಾನೆ. ಈ ಸಂಬಂಧ ಆರೋಪಿ ಬಂಧನಕ್ಕೆ ಶೋಧಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  