ಬೆಂಗಳೂರು: ಪ್ರವಾಹ ಮತ್ತು ಭೂ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಹಿಮಾಚಲ ಪ್ರದೇಶಕ್ಕೆ ರಾಜ್ಯ ಸರ್ಕಾರ ನೆರವಿನ ಹಸ್ತ ಚಾಚಿದ್ದು , ಮುಖ್ಯಮಂತ್ರಿಗಳು 15 ಕೋಟಿ ರೂ. ಗಳನ್ನು ನೀಡುವಂತೆ ಆದೇಶಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಸಂಕಷ್ಟದ ಸಮಯದಲ್ಲಿ ನಮ್ಮ ಸಹೋದರ ಸಹೋದರಿಯರೊಂದಿಗೆ ನಿಲ್ಲುವುದು ಮುಖ್ಯವಾಗಿದೆ. ಕರ್ನಾಟಕದ ಜನರು ಹಿಮಾಚಲ ಪ್ರದೇಶದ ಜನರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಾರೆ ಎಂದು ಹೇಳಿದ್ದಾರೆ. 