ಶಿವಮೊಗ್ಗ: ಕ್ಷುಲಕ ವಿಚಾರಕ್ಕೆ  ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆಸಿದ್ದು, ಈ ವೇಳೆ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಶಿಕಾರಿಪುರದ ಕೆಹೆಚ್‌ಪಿ ಕಾಲೋನಿಯಲ್ಲಿ ಸೋಮವಾರ ಸಂಜೆ ವರದಿಯಾಗಿದೆ. ಜಾಫರ್ (32) ಎಂಬವರು ಕೊಲೆಗೀಡಾದವರು ಎಂದು ತಿಳಿದು ಬಂದಿದೆ. ಎರಡು ಗುಂಪುಗಳ ಮಧ್ಯೆ ಕ್ಷುಲಕ ವಿಚಾರಕ್ಕೆ ಗಲಾಟೆಯಾಗಿದ್ದು, ಜಾಫರ್ ಎದೆಗೆ ಚಾಕು ಹಾಕಲಾಗಿದೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಜಾಫರ್ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಈ ಸಂಬಂಧ ಶಿಕಾರಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.