ಬೆಂಗಳೂರು, ಆ.17: ರೈತರಿಗೆ ಮಾಹಿತಿ  ಸಲಹೆ ,ಮಾರ್ಗದರ್ಶನ ನೀಡುವ ಉದ್ದೇಶದಿಂದ  ಕೃಷಿ ಇಲಾಖೆ ಆಯುಕ್ತಾಲಯದಲ್ಲಿ   ಸ್ಥಾಪಿಸಿರುವ ಏಕೀಕೃತ ಸಹಾಯವಾಣಿ ಕರೆ ಕೇಂದ್ರವನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಉದ್ಘಾಟಿಸಿದರು.ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನ್ಬುಕುಮಾರ್ ,ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ್, ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಹಾಗೂ ವಿವಿಧ ಅಧಿಕಾರಿಗಳು ಹಾಜರಿದ್ದರು   ಈ ಹಿಂದೆ ಆರು ವಿವಿಧ ಯೋಜನೆಗಳಿಗೆ ಇದ್ದ ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಏಕೀಕೃತ ಕರೆ ಕೇಂದ್ರ ಸ್ಥಾಪಿಸಲಾಗಿದೆ. 1800-425-3553 ನೂತನ ಏಕೀಕೃತ ಸಹಾಯವಾಣಿ ಕರೆ ಸಂಖ್ಯೆ.