ಭದ್ರಾವತಿ ಹಳೆ ನಗರ ಪೊಲೀಸ್‌ ಠಾಣೆ ಶಿವಮೊಗ್ಗ, ಆ.15:  ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಭದ್ರಾವತಿ ಹಳೆ ಸೇತುವೆ ಬಳಿ ಮಂಗಳವಾರ ವರದಿಯಾಗಿದೆ.ಭದ್ರಾವತಿಯ ದೊಡ್ಡೇರಿಯ ನರೇಂದ್ರ (30) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಇರಿತದಿಂದಾಗಿ ಗಂಭೀರ ಗಾಯಗೊಂಡಿದ್ದ ನರೇಂದ್ರನನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿತ್ತು. ಆಸ್ಪತ್ರೆಯಲ್ಲಿ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.  ಸಿದ್ದಾಪುರ ತಾಂಡಾದ ಸುನಿಲ್‌ ಎಂಬಾತ ಕೃತ್ಯ ಎಸಗಿದ್ದಾನೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಭದ್ರಾವತಿ ಹಳೆ ನಗರ ಪೊಲೀಸ್‌ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  