ಬೆಂಗಳೂರು, ಆ.14: ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂದು ಫೇಸ್​ಬುಕ್ ಲೈವ್ ವಿಡಿಯೋದಲ್ಲಿ ಹೇಳಿಕೆ ನೀಡಿದ್ದ ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ‌ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ದಲಿತ ಸಮುದಾಯದ ಕುರಿತು ಅವಹೇಳನಕಾರಿ ಪದ ಬಳಕೆ ಮಾಡಿದ ನಟ ಉಪೇಂದ್ರ ವಿರುದ್ದ ಕ್ರಮ ಕೈಗೊಳ್ಳುವಂತೆ ಹಲವು ಸಂಘಟನೆಗಳು ಪಟ್ಟು ಹಿಡಿದಿದ್ದು, ಇದೀಗ ಬೆಂಗಳೂರು ವಿವಿ ವಿದ್ಯಾರ್ಥಿಗಳು, ಉಪೇಂದ್ರ ಪ್ರತಿಕೃತಿ ದಹಿಸಿ, ಕೂಡಲೇ ಬಹಿರಂಗ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಪೋಲೀಸರು ಕೂಡಲೇ ಉಪೇಂದ್ರ ಅವರನ್ನು ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ಉಪೇಂದ್ರ ಮನೆಗೆ ವಿವಿಪುರಂ ವಿಭಾಗದ ಎಸಿಪಿ ನಾಗರಾಜ್ ಭೇಟಿಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಉಪೇಂದ್ರ ಮನೆಗೆ ಸಿ.ಕೆ.ಅಚ್ಚುಕಟ್ಟು ಠಾಣೆ ಪೊಲೀಸರ ಜೊತೆ ಆಗಮಿಸಿರುವ ವಿವಿಪುರಂ ವಿಭಾಗದ ಎಸಿಪಿ ನಾಗರಾಜ್ ಸ್ಥಳ ಮಹಜರು ಮುಗಿಸಿ ತೆರಳಿದ್ದಾರೆ.  