ಬೆಂಗಳೂರು: ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂದು ಫೇಸ್​ಬುಕ್ ಲೈವ್ ವಿಡಿಯೋದಲ್ಲಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ‌ ಮನೆಗೆ ವಿವಿಪುರಂ ವಿಭಾಗದ ಎಸಿಪಿ ನಾಗರಾಜ್ ಭೇಟಿ ನೀಡಿದ್ದಾರೆಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಉಪೇಂದ್ರ ಮನೆಗೆ ಸಿ.ಕೆ.ಅಚ್ಚುಕಟ್ಟು ಠಾಣೆ ಪೊಲೀಸರ ಜೊತೆ ಆಗಮಿಸಿರುವ ವಿವಿಪುರಂ ವಿಭಾಗದ ಎಸಿಪಿ ನಾಗರಾಜ್ ಸ್ಥಳ ಮಹಜರು ಮುಗಿಸಿ ತೆರಳಿದ್ದಾರೆ. ''ಉಪೇಂದ್ರ ನಾಪತ್ತೆ''ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ದೂರು ದಾರ ಸಮತಾ ಸೈನಿಕ ದಳ ಯುವ ಘಟಕ ಅಧ್ಯಕ್ಷ ಗೋಪಾಲ ಗಿರಿಯಪ್ಪ ʼʼಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಮಾತನಾಡುತ್ತಾ, ‘ಊರು ಎಂದ ಮೇಲೆ ಹೊಲಗೇರಿ ಇರುತ್ತದೆ’ ಎಂಬ ಹೇಳಿಕೆ ನೀಡಿದ್ದರು. ಇದು ನಮಗೆ (ದಲಿತ ಸಮಾಜಕ್ಕೆ)  ನೋವಾಗಿದೆ. ಆದ್ದರಿಂದ ನಾವು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಧುಸೂದನ್ ಅವರನ್ನು ಕರೆದುಕೊಂಡು ಬಂದು ಸಿ.ಕೆ.ಅಚ್ಚುಕಟ್ಟು ಠಾಣೆಯಲ್ಲಿ ದೂರು ನೀಡಿದ್ದೆವು, ಅದರಂತೆ ಉಪೇಂದ್ರ ವಿರುದ್ಧ ದೌರ್ಜನ್ಯ ಕಾಯ್ದೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆದರೆ ಈವರೆಗೂ ಪೊಲೀಸರು ಅವರನ್ನು ಬಂಧಿಸಿಲ್ಲ. ಉಪೇಂದ್ರ ಅವರು ಈಗ ನಾಪತ್ತೆಯಾಗಿದ್ದಾರೆʼʼ ಎಂದು ಹೇಳಿದರು. ಉಪೇಂದ್ರ ವಿರುದ್ಧ ಎರಡನೇ ಪ್ರಕರಣ ದಾಖಲುಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ರವಿವಾರ ರಾತ್ರಿ 12ರ ಸುಮಾರಿಗೆ ಉಪೇಂದ್ರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಬೈರಪ್ಪ ಹರೀಶ್ ಕುಮಾರ್ ದೂರು ನೀಡಿದ್ದ ಹಿನ್ನೆಲೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ.