ಯಾದಗಿರಿ, ಆ.11: ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ 10 ತಿಂಗಳ ಮಗುವಿಗೆ ಗಾಯಗೊಂಡಿರುವ ಘಟನೆ  ಗುರುವಾರ ಯಾದಗಿರಿ ಜಿಲ್ಲೆಯ ಮರಕಲ್ ಗ್ರಾಮದಲ್ಲಿ ವರದಿಯಾಗಿದೆ.ಅಂಗನವಾಡಿ ಕೇಂದ್ರದಲ್ಲಿ ಶಿಶುಗಳಿಗೆ ಇಂದ್ರಧನುಷ್ ಲಸಿಕೆ ಹಾಕುವ ಕಾರ್ಯಕ್ರಮವನ್ನು ಅಧಿಕಾರಿಗಳು ಆಯೋಜಿಸಿದ್ದರು. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಕ್ಕೆ ಲಸಿಕೆ ಹಾಕಿಸಲು ಮಗುವಿನ ಜೊತೆ ಕುಟುಂಬಸ್ಥರು ಆಗಮಿಸಿದ್ದರು. ಈ ವೇಳೆ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದಿದೆ ಎನ್ನಲಾಗಿದೆ.ಅಧಿಕಾರಿಗಳ ಭೇಟಿ,  ಗ್ರಾಮಸ್ಥರ ಆಕ್ರೋಶಘಟನೆ ಬಳಿಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮೂರು ವರ್ಷಗಳ ಹಿಂದೆ ಕಟ್ಟಡ ನಿರ್ಮಾಣವಾಗಿದ್ದು, ಕಳಪೆ ಕಾಮಗಾರಿಯಿಂದ ಘಟನೆ ನಡೆದಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. 