ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಯಲ್ಲಿ ಮುಂದಿನ ಐದು ದಿನಗಳವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಮಾನ ಇಲಾಖೆಯು ಮಾಹಿತಿ ನೀಡಿದೆ.   ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ, ವ್ಯಾಪಕ ಮಳೆಯಾಗಲಿದ್ದು, ಆ.19 ಹಾಗೂ ಆ.20ರಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.   ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಕನಿಷ್ಟ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇದೆ. ಮುಂದಿನ ಐದು ದಿನಗಳ ಕಾಲ 2 ರಿಂದ 3 ಡಿಗ್ರಿ ಸೆಲ್ಸಿಯಸ್‍ವರೆಗೆ ಉಷ್ಣಾಂಶದಲ್ಲಿ ಏರುಪೇರು ಆಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.  