ಬೆಂಗಳೂರು: ವಿಪಕ್ಷ ನಾಯಕರ ಹೆಸರನ್ನು ಅಂತಿಮಗೊಳಿಸಲು ವರಿಷ್ಠರ ಕರೆಯ ಮೇರೆಗೆ ರವಿವಾರ ದೆಹಲಿಗೆ ತೆರಳಿರುವ ಮಾಜಿ ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಅವರಿಗೆ ಸೋಮವಾರ ವರಿಷ್ಠರನ್ನು ಭೇಟಿ ಮಾಡಲು ಸಾಧ್ಯವಾಗಿಲಿಲ್ಲ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ʼನಾನು ಈಗ ನಮ್ಮ ಹಲವು ಮಂದಿ ಸಂಸದರನ್ನು ಭೇಟಿಯಾಗಿದ್ಧೇನೆ. ಸಂಸತ್‌ ಅಧಿವೇಶನ ಇರುವುದರಿಂದ ಅಮಿತ್ ಶಾ ಅವರು ಬ್ಯಸಿಯಾಗಿದ್ದಾರೆ. ಹೀಗಾಗಿ ಅವರನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. ಇಂದು (ಮಂಗಳವಾರ) ಅಮಿತ್ ಶಾ ಭೇಟಿ ಮಾಡ್ತೀನಿ, ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಆಗುತ್ತೆʼ ಎಂದು ತಿಳಿಸಿದ್ದಾರೆ. ಇನ್ನು ಬೊಮ್ಮಾಯಿ ಅವರು ಪ್ರತಿಪಕ್ಷ ನಾಯಕನ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದು, ಅವರ ದೆಹಲಿ ಭೇಟಿ ರಾಜ್ಯ ಬಿಜೆಪಿಯಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.