ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ. ವರಿಷ್ಠರ ಕರೆಯ ಮೇರೆ ಬೊಮ್ಮಾಯಿ ಅವರು ರವಿವಾರ ದೆಹಲಿಗೆ ತೆರಳಿದ್ದಾರೆ. ಬೊಮ್ಮಾಯಿ ಪ್ರತಿಪಕ್ಷ ನಾಯಕನ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದು, ಅವರ ದೆಹಲಿ ಭೇಟಿ ರಾಜ್ಯ ಬಿಜೆಪಿಯಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರತಿಪಕ್ಷ ನಾಯಕನ ಆಯ್ಕೆ ವಿಚಾರ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ  ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬೊಮ್ಮಾಯಿ ಜೊತೆಗೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಪ್ರತಿಪಕ್ಷ ನಾಯಕನ ರೇಸ್ ನಲ್ಲಿ ಯಾರ್ಯಾರು?ಮಾಜಿ ಸಿಎಂ ಬೊಮ್ಮಾಯಿ ಹಾಗೂ ಬಸನಗೌಡ ಯತ್ನಾಳ್ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ. ಉಳಿದಂತೆ ಅಶ್ವತ್ಥ್ ‌ನಾರಾಯಣ್ ಮತ್ತು ಆರ್.ಅಶೋಕ್, ಸುನಿಲ್ ಕುಮಾರ್, ಸುರೇಶ್ ಕುಮಾರ್, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೆಸರುಗಳು ಕೇಳಿ ಬರುತ್ತಿವೆ.