ಬೆಂಗಳೂರು: ಪ್ರಧಾನಿ ಮೋದಿ ಅವರು ಯಾವಾಗ ಮೌನವಾಗಿರುತ್ತಾರೆ, ಯಾವಾಗ ಮಾತನಾಡುತ್ತಾರೆ ಎಂಬ ಬಗ್ಗೆ ಆರೋಗ್ಯಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.  ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮೋದಿಯವರ ಮೌನ ಹಾಗೂ ಮಾತನಾಡುವ ಸಂದರ್ಭಗಳನ್ನು ಪಟ್ಟಿ ಮಾಡಿದ್ದಾರೆ.  ಮೋದಿಯವರು ಮೌನವಾಗುವ ಸಂದರ್ಭಗಳು.   * ಗಲಭೆಗಳಾದಾಗ   * ಸಾಮೂಹಿಕ ನರಮೇಧಗಳಾಗುವಾಗ   * ಮಹಿಳೆಯರ ನಗ್ನ ಮೆರೆವಣಿಗೆಯಾಗುವಾಗ   * ಬೆಲೆಯೇರಿಕೆಯಾದಾಗ   * PMCares ಫಂಡ್ ಬಗ್ಗೆ ಕೇಳಿದಾಗ   * 2 ಕೋಟಿ ಉದ್ಯೋಗದ ಬಗ್ಗೆ ಕೇಳಿದಾಗ   * ಕಪ್ಪುಹಣದ ಬಗ್ಗೆ ಕೇಳಿದಾಗ   * ಟೆಲಿಪ್ರಾಂಪ್ಟರ್ ಕೈ ಕೊಟ್ಟಾಗ ಈ ಸಂದರ್ಭಗಳಲ್ಲಿ ಮೋದಿ ಕಠೋರ ಮೌನ ತಪಸ್ವಿಗಳಾಗುತ್ತಾರೆ.  ಮೋದಿಯವರು ಮಾತನಾಡುವ ಸಂದರ್ಭಗಳು.   * ಚುನಾವಣೆ ಬಂದಾಗ   * ಪ್ರಚಾರಕ್ಕೆ ಕರೆದಾಗ   * ಮನ್ ಕಿ ಬಾತ್ ಕಾರ್ಯಕ್ರಮವಿದ್ದಾಗ   * ಎದುರಿಗೆ ಪ್ರಶ್ನೆ ಮಾಡದ ಪತ್ರಕರ್ತರಿಲ್ಲದಿದ್ದಾಗ   * ಜೀ ಹುಜೂರ್ ಎಂದು ಅಡ್ಡಡ್ಡ ಬೀಳುವ ತಮ್ಮ‌ ಪಕ್ಷದ ನಾಯಕರು ಎದುರಿರುವಾಗ ಈ ಸಂದರ್ಭಗಳಲ್ಲಿ ‌ಮೋದಿಯವರು ನಿರಂತರವಾಗಿ, ನಿರರ್ಗಳವಾಗಿ, ಮಾತಾಡುತ್ತಲೇ ಇರುತ್ತಾರೆ ಎಂದು ಟೀಕಿಸಿದ್ದಾರೆ.   