ಬೆಂಗಳೂರು, ಜು.29: ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿದೆ. ಹೊಸ ಪಟ್ಟಿಯನ್ನು  ಬಿಡುಗಡೆ ಮಾಡಲಾಗಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್ ನೀಡಲಾಗಿದೆ.ಎಂಟು ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ.  13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಿ.ಎಲ್. ಸಂತೋಷ್ ಅವರನ್ನು ಮುಂದುವರೆಸಲಾಗಿದೆ.  ತೆಲಂಗಾಣದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಸಂಜಯ್ ಅವರನ್ನು ಇತ್ತೀಚೆಗೆ ತೆಲಂಗಾಣ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲಾಗಿತ್ತು.  ಇತರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳೆಂದರೆ ಅರುಣ್ ಸಿಂಗ್, ಕೈಲಾಶ್ ವಿಜಯ್ ವರ್ಗೀಯ, ದುಷ್ಯಂತ ಕುಮಾರ್ ಗೌತಮ್, ತರುಣ್ ಚುಗ್, ವಿನೋದ್ ತಾವ್ಡೆ, ಸುನೀಲ್ ಬನ್ಸಲ್, ರಾಧಾಮೋಹನ್ ಅಗರ್ವಾಲ್.  ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಹುದ್ದೆಯಲ್ಲಿ ಶಿವ ಪ್ರಕಾಶ್ ಅವರನ್ನು ಮುಂದುವರಿಸಲಾಗಿದೆ.  ಸಂಘಟನಾ ಕಾರ್ಯದರ್ಶಿಗಳು, ಸಹ ಸಂಘಟನಾ ಕಾರ್ಯದರ್ಶಿಗಳು ಕೋಶಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.  भाजपा राष्ट्रीय अध्यक्ष श्री @JPNadda ने निम्नलिखित केंद्रीय पदाधिकारियों के नामों की घोषणा की है- pic.twitter.com/0aaArxHF30