ಬೆಂಗಳೂರು:   ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಸಚಿವರ ನಿಯೋಗ ರಾಜ್ಯಪಾಲರನ್ನು ಇಂದು ಮಧ್ಯಾಹ್ನ ಭೇಟಿ ಮಾಡಲಿದೆ. ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಈ ಬೇಟಿ ತೀರ್ಮಾನಿಸಲಾಗಿದೆ.ರಾಜ್ಯಪಾಲರನ್ನು ಭೇಟಿ ಮಾಡಲಿರುವ ಸಚಿವರ ನಿಯೋಗ ರಾಜ್ಯಪಾಲರಿಗೆ ತಮ್ಮ ಅಭಿಪ್ರಾಯ ತಿಳಿಸಲಿದೆ ಎಂದು ತಿಳಿದು ಬಂದಿದೆ.ಈ ಮಧ್ಯೆ ರಾಜ್ಯಪಾಲರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಆಗ್ರಹಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ  ಅವರು ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.