ಫೈಲ್ ಚಿತ್ರಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಬಹುತೇಕ ಹಳ್ಳ, ಕೆರೆ, ನದಿಗಳು ತುಂಬಿ ಅಪಾಯಕಾರಿ ಮಟ್ಟ ತಲುಪಿದೆ. ತುಂಗಾನದಿ, ಭದ್ರಾ ನದಿ, ಹೇಮಾವತಿ ನದಿ ಸೇರಿದಂತ ಚಿಕ್ಕಮಗಳೂರು ಜಿಲ್ಲೆಯಲ್ಲಿನ ನದಿಗಳು ಅಪಾಯಕಾರಿ ಮಟ್ಟ ಮೀರಿ ಹರಿಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಿದೆ. ಗುಡ್ಡ ಕುಸಿತದಿಂದ ಮುಳ್ಳಯ್ಯನಗಿರಿ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದ್ದು, ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಚಾರ್ಮಾಡಿಘಾಟಿ ಪ್ರದೇಶ ಹಾಗೂ ಮುಳ್ಳಯ್ಯನಗಿರಿ ಪ್ರದೇಶಕ್ಕೆ ಸಾಗುವ ಮಾರ್ಗದಲ್ಲಿ ಅಲ್ಲಲ್ಲಿ ಜಲಪಾತಗಳು ಸೃಷ್ಟಿಯಾಗಿವೆ. ಬಾಬಾ ಬುಡಾನ್ ಗಿರಿಗೆ ತೆರಳುವ ಮಾರ್ಗಮಧ್ಯೆಯಲ್ಲಿರುವ ಹೊನ್ನಮ್ಮನ ಹಳ್ಳ ಉಕ್ಕಿ ಹರಿಯುತ್ತಿದೆ. ಸೂಚನೆಗಳು