ಸಾಂದರ್ಭಿಕ ಚಿತ್ರಚಿಕ್ಕಮಗಳೂರು, ಜು.24: ಕಾಫಿನಾಡಿನಲ್ಲಿ ಮಳೆಯಬ್ಬರ ಮುಂದುವರಿದಿದ್ದು, ಹವಾಮಾನ ಇಲಾಖೆಇಂದು ಕೂಡಾ ಜಿಲ್ಲಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಲೆನಾಡಿನ ಐದು ತಾಲೂಕುಗಳ ಶಾಲೆಗಳಿಗೆ ಜು.24(ಸೋಮವಾರ) ರಜೆ ಘೋಷಣೆ ಮಾಡಿದ ಜಿಲ್ಲಾಡಳಿತ ಆದೇಶಿಸಿದೆ.ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ, ಕಳಸ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.  ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.   