ಕಿತ್ತೂರು ವಿಜಯೋತ್ಸವದ ʼವಿಜಯ ಜ್ಯೋತಿ’ಗೆ ಚಾಲನೆಬೆಂಗಳೂರು: ಸ್ವಾಭಿಮಾನ, ನಾಡಭಕ್ತಿ, ದೇಶಭಕ್ತಿಗೆ ಮತ್ತೊಂದು ಹೆಸರೇ ಕಿತ್ತೂರು ರಾಣಿ ಚೆನ್ನಮ್ಮ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು.ವಿಧಾನಸೌಧದ ಮೆಟ್ಟಿಲುಗಳ ಬಳಿ ‘ಕಿತ್ತೂರು ವಿಜಯೋತ್ಸವದ ವಿಜಯ ಜ್ಯೋತಿ’ಗೆ ಚಾಲನೆ ನೀಡಿ ಅವರು ಮಾತನಾಡಿದರು.ʼರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚೆನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟಿಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ ದೇಶಪ್ರೇಮಿಗಳು ಇವರುʼ ಎಂದರು.ʼನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ರಾಣಿ ಚೆನ್ನಮ್ಮ. ಕಿತ್ತೂರಿನಲ್ಲಿ ಆಚರಿಸಲ್ಪಡುತ್ತಿರುವ ಕಿತ್ತೂರು ಉತ್ಸವಕ್ಕೆ ಮತ್ತು ಕಿತ್ತೂರಿನ‌ ಅಭಿವೃದ್ಧಿಗೆ ಸರಕಾರ ಸಕಲ ನೆರವನ್ನು ನೀಡುತ್ತಿದೆ. ಅಗತ್ಯ ಅನುದಾನವನ್ನೂ ನೀಡುತ್ತಿದೆʼ ಎಂದು ಹೇಳಿದರು.ʼಇಂದು ಮಹಾತ್ಮ ಗಾಂಧಿಯವರ ಜಯಂತಿ. ಜೊತೆಗೆ ಲಾಲ್ ಬಹದ್ದೂರು ಶಾಸ್ತ್ರಿ ಅವರ ಜನುಮದಿನವೂ ಹೌದು. ಗಾಂಧಿ ನಡಿಗೆ ಮೂಲಕ ಗಾಂಧಿ ತತ್ವಾದರ್ಶಗಳು ಇವತ್ತಿನ ಯುವ ಪೀಳಿಗೆಗೆ ತಲುಪಿಸುವ ಪ್ರಯತ್ನ ಮಾಡಿದ್ದೇವೆʼ ಎಂದರು.  