ಹುಬ್ಬಳ್ಳಿ, ಜು.23: ಖಾಸಗಿ ಬಸ್ ವೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಾಚಾರಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರವಿವಾರ ಬೆಳಗ್ಗೆ ನಗರದ ಗದಗ ರಸ್ತೆಯ ರೈಲ್ವೆ ಕಲ್ಯಾಣ ಕೇಂದ್ರದ ಬಳಿ ನಡೆದಿದೆ.ವಿ. ಜಾಕೋಬಾ ಪ್ರಭುದಾಸ್ ವಡಕಪ್ಪೂಲ (49) ಮೃತ ವ್ಯಕ್ತಿಯಾಗಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.  ಘಟನೆ ನಡೆಯುತ್ತಿದಂತೆ ಪರಾರಿಯಾಗಿದ್ದ ಬಸ್ ಚಾಲಕನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಘಟನೆ ಕುರಿತಂತೆ ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.