ಯಾದಗಿರಿ, ಜು.21: ಕಳೆದ ಮೂರು ದಿನಗಳಿಂದ ಯಾದಗಿರಿ ಜಿಲ್ಲೆಯಾದ್ಯಂತ ನಿರಂತರ ಮಳೆ ಬರುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಶುಕ್ರವಾರ (ಜುಲೈ 21ರಂದು) ಒಂದು ದಿನ ರಜೆ ಘೋಷಣೆ ಮಾಡಿ ಆದೇಶ ಮಾಡಲಾಗಿದೆ.ಯಾದಗಿರಿ, ಸುರಪುರ, ಹುಣಸಗಿ, ಶಹಾಪುರ, ವಡಗೇರಾ ಹಾಗೂ ಗುರಮಠಕಲ್ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ, ಅನುದಾನ ರಹಿತ ಶಾಲೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇಂದಿನ ಬದಲಿಗೆ ರವಿವಾರ ಶಾಲೆಗಳ್ನು ನಡೆಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.