ಬೆಂಗಳೂರು: ಸದನದಲ್ಲಿ ಪ್ರತಿಭಟನೆ ನಡೆಸುವ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಮಾಡಿ, ಆರೋಗ್ಯ ವಿಚಾರಿಸಿದರು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯತ್ನಾಳ್ ರನ್ನು ಭೇಟಿಯಾದ ಸಿಎಂ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ  ಖಾದರ್ ಈ ವೇಳೆ ಜೊತೆಗಿದ್ದರು. ಪ್ರತಿಭಟನೆ ವೇಳೆ ಕುಸಿದು ಬಿದ್ದ ಶಾಸಕಬಿಜೆಪಿ ಶಾಸಕರ ಅಮಾನತು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿಧಾನಸೌಧ ಬಳಿ ಗದ್ದಲದ ಮಧ್ಯೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥರಾದರು. ಬಳಿಕ ಅವರನ್ನು ವಿಧಾನಸೌಧದ ಆರೋಗ್ಯ ಸಿಬ್ಬಂದಿ ಕೂಡಲೇ ಉಪಚರಿಸಿದರು. ಬಳಿಕ ಯತ್ನಾಳ್ ಅವರನ್ನು ವೀಲ್ ಚೇರ್ ಮೂಲಕ ಆಂಬ್ಯಲೆನ್ಸ್ ಗೆ ಸಾಗಿಸಿ ಅಲ್ಲಿಂದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.  