ಸಾಂದರ್ಭಿಕ ಚಿತ್ರಬೆಂಗಳೂರು, ಜು.18: ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿ ಬಿದ್ದಿದ್ದ ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ಕಾಲೇಜಿನ 9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.ಗಿರಿನಗರ ನಿವಾಸಿ ಆದಿತ್ಯ ಪ್ರಭು (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ . ಆದಿತ್ಯ ಪ್ರಭು ಹೊಸಕೆರೆಹಳ್ಳಿ ಸಮೀಪದ ಪ್ರತಿಷ್ಠಿತ ಕಾಲೇಜಿನಲ್ಲಿ ಬಿಟೆಕ್‍ನ ದ್ವಿತೀಯ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದ. ಇನ್ನು ಜು.17ರಂದು ನಡೆದ ಪರೀಕ್ಷೆಯಿದ್ದು, ಈ ವೇಳೆ ಮೊಬೈಲ್ ಮೂಲಕ ನಕಲು ಮಾಡುತ್ತಿದ್ದ. ಅದನ್ನು ಗಮನಿಸಿದ ಶಿಕ್ಷಕರು ತಕ್ಷಣ ಆತನ ಪೋಷಕರಿಗೆ ಕಾಲೇಜಿಗೆ ಬರುವಂತೆ ತಿಳಿಸಿದ್ದಾರೆ. ಅದರಿಂದ ಬೇಸರಗೊಂಡು 9ನೇ ಮಹಡಿಗೆ ಹೋಗಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  