ಬೆಂಗಳೂರು, ಜು.15: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಬಹು ನಿರೀಕ್ಷಿತ ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆ ದಿನಾಂಕ ಕೊನೆಗೂ ಪ್ರಕಟವಾಗಿದ್ದು, ಇದೇ ತಿಂಗಳ 19 ರಿಂದ ಮನೆಯ ಯಜಮಾನಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.ಈಗಾಗಲೇ ತಿಳಿಸಿರುವಂತೆ ಪಡಿತರ ಚೀಟಿಯಲ್ಲಿ 'ಯಜಮಾನಿ ಮಹಿಳೆ' ಎಂದು ಗುರುತಿಸಿರುವ ಮಹಿಳೆಯು ಈ  ಯೋಜನೆಯ ಫಲಾನುಭವಿಯಾಗಲಿದ್ದಾರೆ. ಒಂದು ವೇಳೆ  ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್‌ ಟಿ  ಪಾವತಿ ಮಾಡುತ್ತಿದ್ದರೆ, ಅವರು ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಇನ್ನು ಫಲಾನುಭವಿಯು ನೋಂದಣಿಯನ್ನು 2 ವಿಧಾನದಿಂದ ಮಾಡಿಸಬಹುದಾಗಿದೆ.