ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಆರೋಪದ ಮೇಲೆ ಶನಿವಾರ ಟಿ.ನರಸೀಪುರ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ರವಿಕುಮಾರ್‌ ಎಂಬುವವರು ನೀಡಿದ್ದ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 504, 505(1),(B)ರಡಿ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಟಿ.ನರಸೀಪುರದ ಯುವ ಬ್ರಿಗೇಡ್​ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ​rajee_ಹಿಂದೂ  ಎಂಬ ಹೆಸರಿನ ಬಳಕೆದಾರನೊಬ್ಬ ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಎಂದು ತಿಳಿದು ಬಂದಿದೆ. 