ಚಿಕ್ಕಮಗಳೂರು: ಕಾರು ಹಾಗೂ ಬೈಕ್ ಮುಖಾಮುಖಿಯಾಗಿ ಢಿಕ್ಕಿ ಹೊಡೆದ  ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಂಸಾಗರ ಗ್ರಾಮದ ಸಮೀಪ ಶುಕ್ರವಾರ ರಾತ್ರಿ ವರದಿಯಾಗಿದೆ.‌ಮೃತರನ್ನ ಹೊಸದುರ್ಗ ಮೂಲದ ಲೋಹಿತ್ (33) ನಾಗರಾಜ್ (35) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಗಿರಿಜಾ ಶಂಕರ್ ಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಬೈಕ್ ಚಿಕ್ಕಮಗಳೂರಿನಿಂದ ಕಡೂರು‌ ಕಡೆ ತೆರಳುತ್ತಿತ್ತು ಎಂದು ಹೇಳಲಾಗಿದೆ.  ಸ್ಥಳಕ್ಕೆ ಎಸ್ಪಿ, ಎಎಸ್ಪಿ ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.