ಸಾಂದರ್ಭಿಕ ಚಿತ್ರ Photo: PTIಮಂಗಳೂರು: ಸೋಮವಾರ ತಡರಾತ್ರಿ 11 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ದುಬೈ ಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಬೆಳಿಗ್ಗೆಯಾದರೂ ಇನ್ನೂ ಹೊರಡದೆ ಪ್ರಯಾಣಿಕರು ಪರದಾಡುತ್ತಿರುವ ಬಗ್ಗೆ ವರದಿಯಾಗಿದೆ.  ಇಂಜಿನ್ ಹಾಳಾಗಿದೆಯೆಂದು ಉತ್ತರಿಸುತ್ತಿರುವ ಅಧಿಕಾರಿಗಳು ಬದಲಿ ವ್ಯವಸ್ಥೆ ಮಾಡದೇ ಪ್ರಯಾಣಿಕರು ಇಡೀ ರಾತ್ರಿ ವಿಮಾನ ನಿಲ್ದಾಣದಲ್ಲೇ ಉಳಿಯುವಂತೆ ಮಾಡಿರುವುದು ಸರಿಯಲ್ಲ ಎಂದು ಪ್ರಯಾಣಿಕರು ಅಸಮಾಧಾನಗೊಂಡಿದ್ದಾರೆ ಎಂದು ತಿಳಿದು ಬಂದಿದೆ.   ನಿರಂತರವಾಗಿ ಹಲವು ಬಾರಿ ಇದೇ ರೀತಿ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದು ಸಂಬಂಧ ಪಟ್ಟ ಕೇಂದ್ರ ಸರ್ಕಾರ ಈ ಬಗ್ಗೆ ಗಮನಹರಿಸಬೇಕಾಗಿದೆ ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ ಎನ್ನಲಾಗಿದೆ .  