ಸಾಂದರ್ಭಿಕ ಚಿತ್ರ -PTIರಾಮನಗರ: ಮೈಸೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ತಾಲೂಕಿನ ವಡೇರಹಳ್ಳಿಯಲ್ಲಿ ಶುಕ್ರವಾರ ವರದಿಯಾಗಿದೆ.ಕಿಡಿಗೇಡಿಗಳು ಕಲ್ಲು ಹೊಡೆದು ಪರಾರಿಯಾಗಿದ್ದಾರೆನ್ನಲಾಗಿದ್ದು, ರೈಲಿನ ಗಾಜಿನ ಕಿಟಕಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಕೃತ್ಯ ನಡೆದ ಸ್ಥಳಕ್ಕೆ ಮಂಡ್ಯ ರೇಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಂಡ್ಯ ರೇಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 