ಸಾಂದರ್ಭಿಕ ಚಿತ್ರಕೊಡಗು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ, ಕಾಲೇಜುಗಳಿಗೆ ನಾಳೆ (07-07-2023)  ಜಿಲ್ಲಾಧಿಕಾರಿ ವೆಂಕಟ್ ರಾಜಾ ರಜೆ ಘೋಷಿಸಿದ್ದಾರೆ.  