ಅಶ್ರಫ್- ಮೃತ ವ್ಯಕ್ತಿಶಿವಮೊಗ್ಗ: ಕಾರು ಮತ್ತು ಖಾಸಗಿ ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ  ತೀರ್ಥಹಳ್ಳಿ ಹೆದ್ದಾರಿಯ ಸಕ್ರೆಬೈಲು ಸಮೀಪ ಮಂಗಳವಾರ ಸಂಜೆ ವರದಿಯಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕುಪ್ಪೆಪದವು ಕಲ್ಲಾಡಿ ನಿವಾಸಿ ಅಶ್ರಫ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಗಾಯಾಳುಗಳು ಕೂಡ ಅದೇ ಗ್ರಾಮದವರು ಎಂದು ಹೇಳಲಾಗಿದೆ.ಕಾರು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿತ್ತು ಎಂದು ಹೇಳಲಾಗುತ್ತಿದೆ. ಬಸ್ಸು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಸಾಗುತ್ತಿತ್ತು. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ.