ಬೆಂಗಳೂರು: ಸದನದ ಕಲಾಪ ಪ್ರಾರಂಭವಾಗುವುದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪೀಕರ್  ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಮಾಜಿ ಸಚಿವ ಸುನಿಲ್ ಕುಮಾರ್, ಸ್ಪೀಕರ್ ಯು ಟಿ ಖಾದರ್  ಕೂಡಾ ಉಪಸ್ಥಿತರಿದ್ದು, ದ್ವಿಪಕ್ಷಗಳ ನಾಯಕರು ಕೆಲಕಾಲ ಮಾತುಕತೆ ನಡೆಸಿದರು.  