Photo: Twitterಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಫ್ರೀಡಂ ಪಾರ್ಕ್’ನಲ್ಲಿ   ಪ್ರತಿಭಟನೆ  ನಡೆಯಿತು.  ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಚಿವರು ಭಾಗವಹಿಸಿದ್ದರು.  ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಕಾಂಗ್ರೆಸ್ ವಿರುದ್ಧ ಧಿಕ್ಕಾರಗಳನ್ನು ಕೂಗಿದರು. 