ಕೊಪ್ಪಳ: ಬಸ್ ನಿಲ್ಲಿಸದ ಕಾರಣ ಮಹಿಳೆಯೊಬ್ಬರು ಸರಕಾರಿ ಬಸ್ ಗೆ ಕಲ್ಲು ತೂರಿದ ಘಟನೆ ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಬಳಿ ರವಿವಾರ ವರದಿಯಾಗಿದೆ.ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗದ ವೇಗದೂತ ಬಸ್ ಕೊಪ್ಪಳದಿಂದ-ಹೊಸಪೇಟೆಗೆ ಹೊರಟಿತ್ತು. ಇಳಕಲ್ ಬಳಿಯ ಪಾಪನಳ್ಳಿ ನಿವಾಸಿ ಲಕ್ಷ್ಮಿ ಎಂಬುವರು ಬಸ್ ನಿಲ್ಲಿಸಿಲ್ಲವೆಂದು ಬಸ್ ಗೆ ಕಲ್ಲು ಎಸೆದಿದ್ದಾರೆನ್ನಲಾಗಿದೆ. ಬಸ್‌ನ ಚಾಲಕ ಕಲ್ಲು ಎಸೆದ ಮಹಿಳೆಯ ಸಮೇತ ಬಸ್ ಅನ್ನು ಮುನಿರಾಬಾದ್‌ ಪೊಲೀಸ್‌ ಠಾಣೆಗೆ ತೆಗೆದುಕೊಂಡು ಹೋಗಿ ಮಹಿಳೆಯಿಂದ 5 ಸಾವಿರ ದಂಡ ಕಟ್ಟಿಸಿಕೊಂಡು ವಾಪಸ್ ಕಳುಹಿಸಿದ್ದಾರೆ.''ನನ್ನ ಮುಂದೆಯೇ ಹಲವು ಬಸ್‌ಗಳು ಹೋದರೂ ನಿಲ್ಲಿಸಲಿಲ್ಲ. ಮಳೆ ಕೂಡ ಬರುತ್ತಿತ್ತು. ಇಳಕಲ್‌ಗೆ ಹೋಗುವ ಬಸ್‌ಗಾಗಿ ಮಳೆಯಲ್ಲಿ ನಾಲ್ಕೈದು ತಾಸು ಕಾದು ಕುಳಿತಿದ್ದೆ. ಬಸ್‌ ನಿಲ್ಲಿಸದ ಕಾರಣ ಸಿಟ್ಟು ಬಂದು ಕಲ್ಲು ಎಸೆದೆ'' ಎಂದು ಲಕ್ಷ್ಮಿ ಹೇಳಿದ್ದಾರೆ.