ಶಿವಮೊಗ್ಗ: ಕೆಲ ತಿಂಗಳ ಹಿಂದೆ ಕೊಲೆಯಾದ ಬಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬದವರಿಗೆ ಗುಂಪೊಂದು ಜೀವಬೆದರಿಕೆ ಹಾಕಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಸರಕಾರದ ವಿರುದ್ಧ ಹರ್ಷ ಸಹೋದರಿ ಅಶ್ವಿನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವಿನಿ, 'ನಮ್ಮ ಮನೆಯ ಬಳಿ ಕಿನಲ್ಲಿ ಬಂದಿದ್ದ ಗುಂಪೊಂದು ಕೂಗಾಡಿ ಬೆದರಿಕೆ ಹಾಕಿದೆ. ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಬಿಜೆಪಿ ಸರ್ಕಾರ ಇದ್ದರೂ ನಮ್ಮ ಜೀವಕ್ಕೆ ಬೆಲೆ ಇಲ್ಲವಾಗಿದೆ' ಎಂದು ಅಳಲು ತೋಡಿಕೊಂಡಿದ್ದಾರೆ.' ಗೃಹ ಸಚಿವರು ನಮ್ಮ ಜಿಲ್ಲೆಯವರೇ ಆಗಿದ್ದರೂ ನಮಗೆ ರಕ್ಷಣೆ ಯಾವಾಗ ಸಿಗುತ್ತದೆ ಎಂದು ಪ್ರಶ್ನಿಸಿದ ಅವರು, ನಾವು ಪ್ರತಿದಿನ ಭಯದ ವಾತಾವರಣದಲ್ಲಿ ಬದುಕುವಂತಾಗಿದೆ' ಎಂದು ಹೇಳಿದರು.ಇದನ್ನೂ ಓದಿ: ಶಿವಮೊಗ್ಗ | ಹರ್ಷ ಸಹೋದರಿ ಸಹಿತ 15 ಮಂದಿಯ ವಿರುದ್ಧ ಎಫ್ಐಆರ್ ದಾಖಲು