ಸಿದ್ದರಾಮಯ್ಯ(PTI)ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಖಾಸಗಿ ದೂರು ಬಗ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ​ ಆದೇಶ ಕಾಯ್ದಿರಿಸಿ​ದೆ.ಆರ್.ಟಿ.ಐ.ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರ ಸಲ್ಲಿಸಿದ್ದ ಖಾಸಗಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಆದೇಶ ಕಾಯ್ದಿರಿಸಿ, ವಿಚಾರಣೆಯನ್ನು ಆ.13ಕ್ಕೆ ಮುಂದೂಡಿದರು.ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸುವ ಬಗ್ಗೆ  ಅಂದು ಆದೇಶ ಸಾಧ್ಯತೆ ಇದೆ.