ಪ್ರಕಾಶ್‌ ರಾಜ್‌ Photo- PTIಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯನ್ನು ನಟ ಪ್ರಕಾಶ್‌ ರಾಜ್‌ ತಿರಸ್ಕರಿಸಿದ್ದಾರೆ.ಮೂರು ವರ್ಷಗಳ ವಾರ್ಷಿಕ ಪ್ರಶಸ್ತಿಯ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದ್ದ ಕರ್ನಾಟಕ ನಾಟಕ ಅಕಾಡೆಮಿ , 2024–25ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಿತ್ತು.ಈ ಕುರಿತು ಶುಕ್ರವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು,‘ನಾನು ಈಗಷ್ಟೆ ರಂಗಭೂಮಿಗೆ ಮರಳಿ ಬಂದ್ದಿದ್ದೇನೆ .. ಮಾಡಬೇಕಾದ ಕೆಲಸ ಬೆಟ್ಟದಷ್ಟಿದೆ..ನನಗಿಂತಲೂ ಅರ್ಹರು ರಂಗಭೂಮಿಯಲ್ಲಿರುವುದರಿಂದ, ಈ ಪುರಸ್ಕಾರವನ್ನು ಸ್ವೀಕರಿಸಲು ನನ್ನ ಮನಃಸಾಕ್ಷಿ ಒಪ್ಪುತ್ತಿಲ್ಲ, ಕ್ಷಮಿಸಿ. ಅಭಿನಂದಿಸಿದ ಸಹ್ರುದಯರಿಗೆ ಧನ್ಯವಾದಗಳು’ ಎಂದು ಪೋಸ್ಟ್‌ ನಲ್ಲಿ ಹೇಳಿದ್ದಾರೆ. 