ಕಲಬುರಗಿ: ಇಲ್ಲಿನ ಗುಲ್ಬರ್ಗಾ ವಿಶ್ವವಿದ್ಯಾನಿಲಯವು ತನ್ನ 42ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ನಿರ್ಧರಿಸಿದೆ.ಹಿರಿಯ ನ್ಯಾಯವಾದಿ ಅರ್ಚನಾ ಪ್ರದೀಪ್ ತಿವಾರಿ, ಹೋರಾಟಗಾರ ಲಕ್ಷ್ಮಣ್ ದಸ್ತಿ ಹಾಗೂ ಯಶಸ್ವಿ ಕೃಷಿ ಉದ್ಯಮಿ ಲಿಂಗರಾಜಪ್ಪ ಬಸವರಾಜಪ್ಪ ಅಪ್ಪ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ನೀಡಲಾಗುವುದು ಎಂದು ವಿವಿಯ ಕುಲಪತಿ ಪ್ರೊ ದಯಾನಂದ ಅಗಸರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.  ವಿವಿಯ ಸಿಂಡಿಕೇಟ್, ವಿದ್ಯಾ ವಿಷಯಕ ಪರಿಷತ್ ಸಭೆ ಹಾಗೂ ವಿಷಯ ತಜ್ಞರ ಸಮಿತಿ ಶಿಫಾರಸ್ಸಿನ ಮೇರೆಗೆ ರಾಜ್ಯಪಾಲರು ಮೂವರ ಗೌರವ ಡಾಕ್ಟರೇಟ್ ಗೆ ಅನುಮೋದನೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.  ಆ.12ರಂದು ವಿವಿಯ ವಾರ್ಷಿಕ ಘಟಿಕೋತ್ಸವ ನಡೆಯಲಿದೆ.  