ಸಿಎಂ ಸಿದ್ದರಾಮಯ್ಯ (PTI)ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿನ ನಿವೇಶನ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ.ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದು, ನಾಳೆ(ಆ.9)ರಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ. 