ಬೆಂಗಳೂರು : ರಾಜ್ಯ ಸರಕಾರವು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ ಆದೇಶ ಹೊರಡಿಸಿದೆ.  ಸೋಮವಾರ ನಗರಾಭಿವೃದ್ಧಿ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಅವರು, ರಾಜ್ಯದ 61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ.  