ಬೆಳಗಾವಿ : ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಎದುರಿಸಲು ನಾವು ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, "ಮುಡಾ ಪ್ರಕರಣದ ಕುರಿತು ರಾಜ್ಯಪಾಲರು ನೀಡಿರುವ ಶೋಕಾಸ್‌ ನೊಟೀಸ್‌ ಹಿಂತೆಗೆದುಕೊಳ್ಳಬೇಕು. ಅದೇ ರೀತಿ ರಾಜ್ಯಪಾಲರಿಗೆ ಟಿ.ಜೆ.ಅಬ್ರಹಾಂ ನೀಡಿರುವ ದೂರನ್ನು ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದೇವೆ" ಎಂದರು.ಈ ಕುರಿತಾಗಿ ರಾಜ್ಯಪಾಲರು ಯಾವ ತೀರ್ಮಾನ ಕೈಗೊಳ್ಳುತ್ತಾರೆ  ಎಂಬುದನ್ನು ಕಾದು ನೋಡುತ್ತೇವೆ ಎಂದು ತಿಳಿಸಿದರು.