PC: x.com/CMofKarnatakaಬೆಂಗಳೂರು, ಆಗಸ್ಟ್ 02: ಮುಖ್ಯಮಂತ್ರಿಗಳಿಗೆ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟೀಸನ್ನು ಹಿಂದಕ್ಕೆ ಪಡೆಯಬೇಕು ಹಾಗೂ ಟಿ. ಜೆ.ಅಬ್ರಹಾಂ ಅವರು ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಲು ರಾಜ್ಯಪಾಲರಿಗೆ ಸಲಹೆ ನೀಡಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ರಾಜ್ಯಪಾಲರು ಮುಖ್ಯಮಂತ್ರಿಗಳೊಂದಿಗೆ  ಕಾರಣ ಕೇಳಿ ನೋಟೀಸು ನೀಡಿರುವ ಬಗ್ಗೆ ಅವರು ಇಂದು ಮಾಧ್ಯಮಗಳಿಗೆ  ಪ್ರತಿಕ್ರಿಯೆ ನೀಡಿದರು.ರಾಜ್ಯಪಾಲರು ನೋಟೀಸ್ ನೀಡಿರುವ ಕುರಿತ ಮಾಧ್ಯಮಗಳ ಪ್ರಶ್ನೆಗೆ ಮುಖ್ಯಮಂತ್ರಿ @siddaramaiah ಅವರ ಪ್ರತಿಕ್ರಿಯೆ: ರಾಜ್ಯಪಾಲರು ನೀಡಿರುವ ಶೋಕಾಸ್ ನೋಟೀಸನ್ನು ಹಿಂದಕ್ಕೆ ಪಡೆಯಬೇಕು ಹಾಗೂ ಟಿ.ಜೆ.ಅಬ್ರಹಾಂ ಅವರು ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ರಾಜ್ಯಪಾಲರಿಗೆ ಸಲಹೆ ನೀಡಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ… 