PC : x/@CMofKarnatakaಹೊಸದಿಲ್ಲಿ : ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಮಂಗಳವಾರ ಹೊಸದಿಲ್ಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೌಹಾರ್ದಯುತವಾಗಿ ಭೇಟಿ ಮಾಡಿದರು.  ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ.  ಎಚ್.ಸಿ. ಮಹದೇವಪ್ಪ ಹಾಗೂ ಹೊಸದಿಲ್ಲಿಯಲ್ಲಿನ ರಾಜ್ಯ ಸರಕಾರದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಉಪಸ್ಥಿತರಿದ್ದರು.  