PC :x/@dasadarshanಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಮನೆಯೂಟಕ್ಕೆ ಅನುಮತಿ ನೀಡಲು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ನಿರಾಕರಿಸಿದೆ.ಮನೆ ಊಟ, ಹಾಸಿಗೆ, ದಿಂಬು, ಪುಸ್ತಕಗಳಿಗೆ ಅನುಮತಿ ನೀಡಬೇಕೆಂದು ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ‌ದ್ದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ದರ್ಶನ್‌ ಅರ್ಜಿಯನ್ನು ವಜಾಗೊಳಿಸಿದೆ.ಹೀಗಾಗಿ ನಟ ದರ್ಶನ್‌ ಜೈಲೂಟವನ್ನೇ ಮಾಡಬೇಕಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ದರ್ಶನ್‌ಗೆ ಮನೆ ಊಟಕ್ಕೆ ಅನುಮತಿ ನೀಡಬೇಕು ಎಂದು ಈ ಹಿಂದೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಹೈಕೋರ್ಟ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ  ಸೂಚನೆ ನೀಡಿತ್ತು.ಹೀಗಾಗಿ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮನೆಯೂಟಕ್ಕೆ ಅವಕಾಶ ನೀಡಲು ನಿರಾಕರಿಸಿದೆ. ದರ್ಶನ್‌ ಮನೆ ಊಟದ ಬೇಡಿಕೆಯನ್ನು ನ್ಯಾಯಾಲಯ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ದರ್ಶನ್‌ ಪರ ವಕೀಲರು ಮತ್ತೆ ಮನವಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.