ನಿರ್ಮಲಾ ಸೀತಾರಾಮನ್ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.ಎಫ್ಐಆರ್ ರದ್ದು ಕೋರಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಈಡಿ ಅಧಿಕಾರಿಗಳು, ನಳೀನ್ ಕುಮಾರ್ ಕಟೀಲ್, ಜೆಪಿ ನಡ್ಡಾ ಹಾಗೂ ವಿಜಯೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.ಮುಂದಿನ ವಿಚಾರಣೆಯನ್ನು ಅ.22ಕ್ಕೆ ನಿಗದಿ ಮಾಡಿದೆ.