ಬೆಂಗಳೂರು:ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸಲು ಸಹಾಯಧನ ನೀಡಲು ತೀರ್ಮಾನಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಕರಾವಳಿಯ ಜಾನಪದ ಕ್ರೀಡೆಯಾದ ಪ್ರತಿ ಕಂಬಳಕ್ಕೆ ರೂ.5 ಲಕ್ಷಗಳನ್ನು ಸಹಾಯಧನ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ತಲಾ ರೂ.5 ಲಕ್ಷಗಳಂತೆ ರೂ.50 ಲಕ್ಷ ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ರೂ.50 ಲಕ್ಷಗಳಂತೆ ರೂ.1 ಕೋಟಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಕಂಬಳಗಳಿಗೆ ಸಹಾಯಧನ ನೀಡಲಾಗುವುದು.
ಇದನ್ನೂ ಓದಿ:ಗದ್ದೆ ಉಳುಮೆ ಮಾಡಿದ್ರು ರಶ್ಮಿಕಾ ಮಂದಣ್ಣ- ವಿಡಿಯೋ ವೈರಲ್​
ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ.ಯೋಗೇಶ್ವರ ರವರು ಕೆಲವು ದಿನಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಂಬಳ ವೀಕ್ಷಿಸಿ ಸ್ಥಳದಲ್ಲಿಯೇ ಪ್ರತಿ ಕಂಬಳಕ್ಕೆ ರೂ.5 ಲಕ್ಷಗಳ ಸಹಾಯಧನ ಘೋಷಣೆ ಮಾಡಿದ್ದರು. ಈ ಘೋಷಣೆಯ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಸಹಾಯಧನ ಬಿಡುಗಡೆ ಆದೇಶವನ್ನು ಹೊರಡಿಸಿದೆ.
ಡಿಪ್ಲೋಮಾ ಪದವೀಧರರಿಗೆ ಟೆಲಿಕಾಂನಲ್ಲಿ ಉದ್ಯೋಗಾವಕಾಶ- ಇಂದೇ ಕೊನೆ ದಿನ

ದೇಶದಲ್ಲಿ ಏಕರೂಪ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಕಾಂಗ್ರೆಸ್ ಶಾಸಕರ ಆಗ್ರಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
