ಬೆಂಗಳೂರು:ದೀಪಾವಳಿ ಹಬ್ಬದ ಪ್ರಯುಕ್ತ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ನ. 13 ಮತ್ತು 14ರಂದು ಬೆಂಗಳೂರಿನಿಂದ ರಾಜ್ಯ ಮತ್ತು ಹೊರರಾಜ್ಯದ ವಿವಿಧ ಸ್ಥಳಗಳಿಗೆ ಕೆಎಸ್ಸಾಟಿರ್ಸಿಯಿಂದ 1 ಸಾವಿರ ಹೆಚ್ಚುವರಿ ಬಸ್​ ಕಾರ್ಯಾಚರಣೆ ಮಾಡಲಾಗುತ್ತಿದೆ.
ಕೆಂಪೇಗೌಡ ಬಸ್​ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್​, ತಿರುಪತಿ ಮೊದಲಾದ ಸ್ಥಳಗಳಿಗೆ ವಿಶೇಷ ಬಸ್​ ಸಂಚರಿಸಲಿವೆ. ಮೈಸೂರು ರಸ್ತೆಯ ಸೆಟಲೈಟ್​ ಬಸ್​ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಸೇರಿ ಇನ್ನಿತರ ಕಡೆಗಳಿಗೆ, ಶಾಂತಿನಗರ ಬಿಎಂಟಿಸಿ ಬಸ್​ ನಿಲ್ದಾಣದಿಂದ ತಿರುಪತಿ, ವಿಜಯವಾಡ, ಹೈದರಾಬಾದ್​, ತಿರುವನಂತಪುರ, ಕೊಟ್ಟಾಯಂ ಸೇರಿ ಅಂತಾರಾಜ್ಯ ನಗರಗಳಿಗೆ ವಿಶೇಷ ಬಸ್​ ಸಂಚರಿಸಲಿವೆ. ಅದೇ ರೀತಿ ತಾಲೂಕು ಹಾಗೂ ಜಿಲ್ಲಾ ಬಸ್​ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಬಸ್​ ಕಾರ್ಯಾಚರಿಸಲಾಗುತ್ತದೆ.
ಇದನ್ನೂ ಓದಿ:ಕಾಂಗ್ರೆಸ್​ ಮುರಾಬಟ್ಟೆಯಾಗುತ್ತಿದೆ, ಕನಕಪುರದ ಬಂಡೆಯಿಂದ ಏನೂ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ; ಜಗದೀಶ್​ ಶೆಟ್ಟರ್​
ಹಬ್ಬದ ಬಳಿಕ ನ.16ರಂದು ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್​ ಕಾರ್ಯಾಚರಣೆ ಇರಲಿದೆ. ಈ ಹೆಚ್ಚುವರಿ ಬಸ್​ಗಳಲ್ಲಿ ಮುಂಗಡ ಆಸನ ಕಾಯ್ದಿರಿಸಲು ಅವಕಾಶವಿದ್ದು, ನಿಗಮದ ಜಾಲತಾಣ www.ksrtc.in ಹಾಗೂ ರಾಜ್ಯ ಹಾಗೂ ಹೊರರಾಜ್ಯದ 706 ಬುಕ್ಕಿಂಗ್​ ಕೌಂಟರ್​ಗಳಲ್ಲಿ ಮುಂಗಡ ಆಸನ ಕಾಯ್ದಿರಿಸಬಹುದು. ಪ್ರಯಾಣಿಕರು ಬಸ್​ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಟಿಕೆಟ್​ಗಳ ಮೇಲೆ ನಮೂದಿಸಲಾದ ಬಸ್​ ನಿಲ್ದಾಣ ಅಥವಾ ಪಿಕ್​ ಅಪ್​ ಪಾಯಿಂಟ್​ ಹೆಸರನ್ನು ಗಮನಿಸುವಂತೆ ತಿಳಿಸಲಾಗಿದೆ.
ಪರಸ್ಪರ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು- ಚೀನಾ ಮತ್ತು ಪಾಕ್​ ಪ್ರಧಾನಿ ಮೋದಿ ಕಠಿಣ ಎಚ್ಚರಿಕೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
