ಮಂಗಳೂರು:ವೇಗವಾಗಿ ಬಂದ ಕಾರೊಂದು ಪಾದಚಾರಿಗಳ ಮೇಲೆ ಹರಿದ ಪರಿಣಾಮ ಓರ್ವ ಯುವತಿ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನ ಲೇಡಿಹಿಲ್​ ಪ್ರದೇಶದಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ರೂಪಶ್ರೀ (23) ಎಂದು ತಿಳಿದುಬಂದಿದ್ದು, ಗಾಯಾಳುಗಳನ್ನು ಸ್ವಾತಿ( 26) ಹಿತನ್ವಿ(16) ಕೃತಿಕಾ( 16) ಯತಿಕಾ (12) ಎಂದು ಗುರುತಿಸಲಾಗಿದೆ. ಆರೋಪಿ ಪೊಲೀಸ್​ ಠಾಣೆಗೆ ತೆರಳಿ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
Car driver kills a woman and injures 4 at Gandhinagara in#Mangaluruaround 4 pm on October 18. The women were walking home from#kudrolitemplepic.twitter.com/0TDxSzPDJW
ಇದನ್ನೂ ಓದಿ:ಸಾಕಲು ಕಷ್ಟವಾಗುತ್ತಿದೆ ಎಂದು ಮಗನನ್ನು ಕೆರೆಗೆ ಎಸೆದು ಕೊಂದ ಕ್ರೂರಿ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಫುಟ್​ಪಾತ್​ ಮೇಲೆ ನಡೆದುಕೊಂಡು ಹೋಗುತ್ತಿರುವವರ ಮೇಲೆ ವೇಗವಾಗಿ ಬರುವ ಬಿಳಿ ಬಣ್ನದ ಕಾರೊಂದು ಏಕಾಏಕಿ ಪಾದಚಾರಿ ಮಾರ್ಗದ ಮೇಲೆ ಹರಿದಿದೆ. ಈ ವೇಳೆ ಓರ್ವ ಯುವತಿ ಸಾವನ್ನಪ್ಪಿದ್ದು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದಾದ ಬಳಿಕ ಅಪಘಾತದ ಬಳಿಕ ಕಾರಿನ ಸಮೇತ ಪರಾರಿಯಾಗಿದ್ದ ಆರೋಪಿ ಕಮಲೇಶ್​ ಬಲ್​ದೇವ್ (57) ಬಳಿಕ ತನ್ನ ತಂದೆಯೊಂದಿಗೆ ಹತ್ತಿರದ ಪೊಲೀಸ್​ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಮದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 12 =
Remember me
