ಬೆಂಗಳೂರು:ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ವಿಜಯವಾಣಿ ಹಾಗೂ ದಿಗ್ವಿಜಯ ವಾಹಿನಿ ವತಿಯಿಂದ ಆ. 6ರಂದು ಬೆಂಗಳೂರಿನ 10 ಕಾಲೇಜುಗಳಲ್ಲಿ ಆಯೋಜಿಸಿದ್ದ ಅಂತರ ಕಾಲೇಜು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ 10 ವಿದ್ಯಾರ್ಥಿಗಳಿಗೆ ಸೋಮವಾರ ಸಮಾಧಾನಕರ ಬಹುಮಾನ ವಿತರಣೆ ಮಾಡಲಾಯಿತು.
‘ಟಾರ್ಗೆಟ್-2047’ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ಭಾರತ ಸ್ವಾತಂತ್ರ್ಯದ ಶತಮಾನೋತ್ಸವ ಅಂದರೆ ಮುಂದಿನ 25 ವರ್ಷಗಳಲ್ಲಿ ಸಾಧಿಸಬೇಕಿರುವುದೇನು? ಇದರಲ್ಲಿ ಯುವಜನರ ಪಾತ್ರ ಏನು? ಎಂಬ ವಿಷಯ ಕುರಿತು ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಬೆಂಗಳೂರು ನಗರದ 10 ಕಾಲೇಜುಗಳ ಪಿಯುಸಿ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಮಾಧಾನಕರ ಬಹುಮಾನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅವರ ಕಾಲೇಜಿಗೆ ತೆರಳಿ ಪ್ರಮಾಣಪತ್ರ ವಿತರಿಸಲಾಯಿತು. ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಕಾಲೇಜಿನ ಮುಖ್ಯಸ್ಥರು ಬಹುಮಾನ ವಿತರಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ವಿಜಯವಾಣಿ ತಂಡದವರು ಭಾಗವಹಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
