ಬೆಂಗಳೂರು:ನಗರದ ಕೋರಮಂಗಲದ ವೆಂಕಟಶಿವಾರೆಡ್ಡಿ ಲೇಔಟ್ ನ ಭಾರ್ಗವಿ ಸ್ಟೇಯಿಂಗ್‌ ಹೋಮ್ಸ್‌ ಫಾರ್‌ ಲೇಡೀಸ್‌ ಎಂಬ ಮಹಿಳೆಯರ ಪಿಜಿಯಲ್ಲಿ ಯುವತಿ ಕೃತಿ ಕುಮಾರಿ ಹತ್ಯೆ ಪ್ರಕರಣದ ಆರೋಪಿಯನ್ನು 10 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ.
ಇದನ್ನೂ ಓದಿ:ಕೇರಳದಲ್ಲಿ ತಿಂಗಳಲ್ಲಿ 4 ದಿನ ‘ಬ್ಯಾಗ್​ಲೆಸ್ ಸ್ಕೂಲ್ ದಿನ’ ಆಚರಣೆಗೆ ಸರ್ಕಾರ ಆದೇಶ
ಜುಲೈ 23 ರಂದು ನಡೆದಿದ್ದ ಕೃತಿ ಕುಮಾರಿಯ ಕೊಲೆ ಪ್ರಕರಣದ ಆರೋಪಿ ಅಭಿಷೇಕ್‌ನನ್ನು ಶನಿವಾರ ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿ, ವಿಮಾನದ ಮೂಲಕ ಬೆಂಗಳೂರಿಗೆ ಕರೆತಂದಿದ್ದರು. ಬಳಿಕ ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದರು. ಈ ಸಂದರ್ಭದಲ್ಲಿ ವಿಚಾರಣೆ ನಡೆಸಲು ಅವಕಾಶ ಕೋರಿದ್ದರಿಂದ ಕೋರ್ಟ್‌ ಹತ್ತು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತು.
ಈ ಕುರಿತು ಪ್ರತಿಕ್ರಿಯೆ ನೀಡಿದ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ, ಕೃತಿ ಕುಮಾರಿ ಕೊಲೆ ಪ್ರಕರಣದಲ್ಲಿ ಮಧ್ಯಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದ್ದೇವೆ. ಈಗಷ್ಟೇ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಯಾವ ಕಾರಣಕ್ಕೆ ಕೊಲೆಯಾಗಿದೆ ಅನ್ನೋದು ತಿಳಿಯಬೇಕಿದೆ. ಆರೋಪಿ ಅಭಿಷೇಕ್ ಎಂಬಿಎ ಓದಿಕೊಂಡು ಬೆಂಗಳೂರಿಗೆ ಬಂದಿದ್ದಾನೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ. ಆರೋಪಿ ತನ್ನ ಸಹೋದರನ ಜೊತೆಗೆ ವಾಸವಿದ್ದ ಅನ್ನೋದು ಗೊತ್ತಾಗಿದೆ. ಆರೋಪಿಯ ವಿಚಾರಣೆಯ ನಂತರವಷ್ಟೇ ಎಲ್ಲಾ ವಿಚಾರಗಳು ತಿಳಿಯಬೇಕಿದೆ ಎಂದು ಹೇಳಿದ್ದಾರೆ.
ಜುಲೈ 23ರ ರಾತ್ರಿ 11.10ಕ್ಕೆ ಯುವಕನೋರ್ವ ಚಾಕು ಇಟ್ಟುಕೊಂಡು ಯುವತಿ ಇದ್ದ ಲೇಡಿಸ್ ಪಿಜಿಯೊಳಗೆ ನುಗ್ಗಿದ್ದು 3ನೇ ಮಹಡಿಯಲ್ಲಿರುವ ಕೊಠಡಿ ಬಳಿ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯನ್ನು ಗುರುತಿಸಿದ್ದರು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಗ್ರೇಟರ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆ ಶಿವಕುಮಾರ್ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − two =
Remember me
