ಮಂಡ್ಯ:ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ, ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಇದೀಗ ಮತ್ತೊಂದು ರೀತಿಯಲ್ಲಿ ಸ್ಪಂದಿಸಿದ್ದು, ಆ ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ಮುಂದಾಗಿದೆ.
ಅಂದರೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಗೀಡಾಗಿರುವ ಬಾಲಕಿಯ ಕುಟುಂಬಕ್ಕೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ಹತ್ತು ಲಕ್ಷ ರೂಪಾಯಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ತಾವು ನೀಡಿದ್ದ ಭರವಸೆಗೆ ತಕ್ಕಂತೆ ಸಿಎಂ ಬಸವರಾಜ ಬೊಮ್ಮಾಯಿ ನಡೆದುಕೊಂಡಿದ್ದಾರೆ.
ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾದ ಬಾಲಕಿಯ ಕುಟುಂಬಕ್ಕೆ ಸರ್ಕಾರ ಸಹಾಯ ಮಾಡಬೇಕು ಎಂದು ನಿನ್ನೆ ಕುಂಭಮೇಳದ ಸಂದರ್ಭದಲ್ಲಿ ಸಂಸದೆ ಸುಮಲತಾ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿಕೊಂಡಿದ್ದರು. ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಸಿಎಂ, ಕೋರಿಕೆ ಈಡೇರಿಸುವ ಭರವಸೆ ನೀಡಿದ್ದರು.
ಇಂದು ಪರಿಹಾರ ಧನ ಬಿಡುಗಡೆ ಮಾಡಿ ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ ಆದೇಶ ಮಾಡಿದ್ದು, ಮಂಡ್ಯ ಜಿಲ್ಲಾಧಿಕಾರಿಯವರ ಖಾತೆಗೆ ಹಣ ಬಿಡುಗಡೆ ಆಗಿದೆ. ಅಲ್ಲದೆ ಮೃತ ಬಾಲಕಿಯ ಕುಟುಂಬಕ್ಕೆ ಪರಿಹಾರ ವಿತರಿಸಲು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಲಾಗಿದೆ.
ಕಾಲಿಗೆ ಬಿದ್ದು ಕೇಳ್ತೀನಿ, ಇದೊಂದು ಸಲ ದಯವಿಟ್ಟು ಕ್ಷಮಿಸಿ!; ಅಪ್ಪು ಅಭಿಮಾನಿಗಳ ಅಬ್ಬರಕ್ಕೆ ತತ್ತರಿಸಿದ ಕಿಡಿಗೇಡಿ

‘ಕಾಂತಾರ’ಕ್ಕೆ ಕರಾವಳಿ ಬೆಡಗಿಯರ ಮೆಚ್ಚುಗೆ: ಅನುಷ್ಕಾ ಶೆಟ್ಟಿ ಬಳಿಕ ಇದೀಗ ಶಿಲ್ಪಾ ಶೆಟ್ಟಿ…

ಕಾಲಮಿತಿ ಯಕ್ಷಗಾನ: ರಾತ್ರಿ ಇಡೀ ಪ್ರದರ್ಶನ ಅನಿವಾರ್ಯವೇ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + sixteen =
Remember me
